ಬುಧವಾರ, ಸೆಪ್ಟೆಂಬರ್ 25, 2019

ಕೂದಲುದುರುವಿಕೆಗೆ ನೈಸರ್ಗಿಕ ಪರಿಹಾರ

ಯಾವುದೇ ಎಣ್ಣೆ ಶ್ಯಾಂಪೂ ಬಳಸಿದರೂ ಕೂದಲು ಉದುರುವುದು ಕಡಿಮೆ ಆಗುತ್ತಿಲ್ಲವೆಂದು ಚಿಂತೆ ಮಾಡಬೇಡಿ. ಈರುಳ್ಳಿ ಇದಕ್ಕೆ ಪರಿಹಾರ ನೀಡುತ್ತದೆ.

ಈರುಳ್ಳಿಯ ರಸ ತೆಗೆದು ತಲೆಗೆ ಹಚ್ಚಿ ಅರ್ಧ ಗಂಟೆಯ ನಂತರ ಸ್ನಾನ ಮಾಡಿದರೆ ತಲೆ ಹೊಟ್ಟು ನಿಧಾನವಾಗಿ ನಿವಾರಣೆಯಾಗುತ್ತದೆ. ವಾರದಲ್ಲಿ ಎರಡು ಬಾರಿ ಹೀಗೆ ಮಾಡಿದರೆ ಉತ್ತಮ ಫಲಿತಾಂಶ ಸಿಗುತ್ತದೆ. ತಲೆಗೆ ಶ್ಯಾಂಪೂ ಬಳಸಿ ಸ್ನಾನ ಮಡಿದ ಬಳಿಕ ಕೊನೆಯಲ್ಲಿ ಬಿಸಿನೀರಿಗೆ ಈರುಳ್ಳಿ ರಸ ಹಾಕಿ ತೊಳೆಯುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ಈ ರೀತಿ ಮಾಡುತ್ತಾ ಬಂದರೆ ಕೂದಲ ಎಲ್ಲ ಸಮಸ್ಯೆಗಳು ಬಹುಬೇಗ ಕಡಿಮೆಯಾಗುತ್ತದೆ.

ಕೊಬ್ಬರಿ ಎಣ್ಣೆಯ ಜತೆಗೆ ಒಂದು ಚಮಚ ಈರುಳ್ಳಿ ರಸ, ಒಂದು ಚಮಚ ಬಾದಾಮಿ ಎಣ್ಣೆ ಮಿಶ್ರಣ ಮಾಡಿಕೊಂಡು ತಲೆಗೆ ಮಸಾಜ್ ಮಾಡುವುದರಿಂದ ಕೂದಲಿಗೆ ಕಾಂತಿ ಬರುವುದರ ಜತೆಗೆ ಹೊಟ್ಟು ಕೂಡ ನಿವಾರಣೆಯಾಗುತ್ತದೆ.

ಈರುಳ್ಳಿಗೆ ಜೇನುತುಪ್ಪ ಸೇರಿಸಿಕೊಂಡು ದಿನನಿತ್ಯ ಸೇವಿಸುವುದರಿಂದ ಕೂದಲು ಉದುರುವುದು ಕಡಿಮೆಯಾಗುತ್ತದೆ. ಈರುಳ್ಳಿಯನ್ನು ಸಣ್ಣದಾಗಿ ಹೆಚ್ಚಿ ಅದಕ್ಕೆ ಒಂದು ಚಮಚ ಆಲಿವ್ ಎಣ್ಣೆ ಸೇರಿಸಿ ತಲೆಗೆ ಹಚ್ಚಿ ಎರಡು ಗಂಟೆಯ ನಂತರ ಸ್ನಾನ ಮಾಡಿದರೆ ಕೂದಲು ಆರೋಗ್ಯವಾಗಿರುತ್ತದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ