ಬುಧವಾರ, ಸೆಪ್ಟೆಂಬರ್ 25, 2019

ತುಳಸಿ

ತುಳಸಿ ಬರಿ ಪೂಜೆಗೆ ಮಾತ್ರ ಸೀಮಿತವಾಗಿಲ್ಲ ಹಲವು ರೋಗಗಳನ್ನು ನಿವಾರಿಸುವ ಶಕ್ತಿಯನ್ನು ಹೊಂದಿದೆ.. ಆಯುರ್ವೇದದಲ್ಲಿ ತುಳಸಿ ತನ್ನದೇ ಅದ ಮಹತ್ವವನ್ನು ಹೊಂದಿದೆ. ಹಾಗಾದರೆ ತುಳಸಿ (ದಳ) ಎಲೆಯನ್ನು ಸೇವಿಸುವುದರಿಂದ ಯಾವೆಲ್ಲ ಸಮಸ್ಯೆಯಿಂದ ಮುಕ್ತಿ ಹೊಂದಬಹುದು ಅನ್ನೋದನ್ನ ತಿಳಿಯೋಣ ಬನ್ನಿ…

ತುಳಸಿಯನ್ನು ಸೇವನೆ ಮಾಡುವುದರಿಂದ ನಮ್ಮ ದೇಹಕ್ಕೆ ಯಾವುದೇ ತರಹದ ಅಡ್ಡ ಪರಿಣಾಮ ಬೀರುವುದಿಲ್ಲ.

ತುಳಸಿ ಸೇವನೆ ಮಾಡೋದ್ರಿಂದ ಜ್ವರ, ವಿಷಮ ಶೀತ, ಶ್ವಾಸಕೋಶದ ಸೋಂಕು, ಕೆಮ್ಮು ಮತ್ತು ನೆಗಡಿ ಹೋಗಲಾಡಿಸುತ್ತದೆ . ಅಷ್ಟೇ ಅಲ್ಲದೆ ತುಳಸಿ ಕಷಾಯ ಕುಡಿದರೆ ದೇಹ ಸದೃಢವಾಗುವುದರೊಂದಿಗೆ ಹೊಟ್ಟೆ ಸಂಬಂಧಿ ರೋಗಳನ್ನು ದೂರವಿರಿಸಬಹುದು.

ಉತ್ತಮ ಅರೋಗ್ಯ ನಿಮ್ಮದಾಗಬೇಕೆಂದರೆ ಪ್ರತಿದಿನ ೫-೬ ತುಳಸಿ ಎಲೆಗಳನ್ನು ತಿನ್ನುವುದು ಒಳ್ಳೆಯದು. ರೋಗ ನಿರೋಧಕ ಶಕ್ತಿ ವೃದ್ದಿಯಾಗುವುದಲ್ಲದೆ ಬಾಯಿಯ ದುರ್ಗಂಧವು ಕೂಡಾ ನಿವಾರಣೆಯಾಗುತ್ತದೆ.

ತುಳಸಿ ಎಲೆಯ ರಸವನ್ನು ಎಣ್ಣೆಯಲ್ಲಿ ಕಾಯಿಸಿ ತಲೆಗೆ ಹಚ್ಚುವುದರಿಂದ ತಲೆಯಲ್ಲಿನ ಹೇನು, ಹೊಟ್ಟು ಬರುವಿಕೆ ಕೂಡಾ ನಿವಾರಣೆಯಾಗುತ್ತದೆ. ಹಾಗೆಯೇ ಹಲವು ವಿಧದ ಚರ್ಮ ಸಂಬಂಧಿ ರೋಗಗಳಿಂದಲೂ ನಿವಾರಣೆ ಮಾಡುತ್ತದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ